ಮಕ್ಕಳ ಆರೋಗ್ಯ ವಿಚಾರಣೆ :
ರಾಯಚೂರು : (Minister Bhosaraju )ಇತ್ತೀಚಿಗೆ ಸಂಭವಿಸಿದ ಶಾಲಾ ಬಸ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ನಗರದ ರಿಮ್ಸ್ ಗೆ ದಾಖಲು ಮಾಡಿದ್ದರಿಂದ ಇಂದು (Minister Bhosaraju) ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಕಲ್ಯಾಣ ಸಾರಿಗೆ ಸಂಸ್ಥೆ ಬಸ್-ಶಾಲಾ ವಾಹನ ನಡುವೆ ಉಂಟಾದ ಅಪಘಾತದಲ್ಲಿ ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ನಗರದ ರಿಮ್ಸ್ ನಲ್ಲಿ ದಾಖಲು ಚಿಕಿತ್ಸೆ ನೀಡಲಾಗುತ್ತಿದೆ. (Minister Bhosaraju) ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರು ನಗರದ ರಿಮ್ಸ್ ಹಾಗೂ ಸುರಕ್ಷಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳು ವಿದ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.
ಗುಂಡಿ ಮುಚ್ಚಲು ಸೂಚನೆ :
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಪಗಲ್ ಕ್ರಾಸ್ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಾರೆ. ರಸ್ತೆ ಅಪಘಾತಕ್ಕೆ ರಸ್ತೆ ಗುಂಡಿಗಳೇ ಕಾರಣ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ PWD ಇಂಜಿನಿಯರ್ ಜೊತೆ ಮಾತನಾಡಿದ್ದೇನೆ. ತಕ್ಷಣವೇ ರಸ್ತೆ ಗುಂಡಿ ಮುಚ್ಚಲು ಹೇಳಿದ್ದೇನೆ. ಸದ್ಯ ಮಕ್ಕಳಿಗೆ ಪರಿಹಾರ ಹಣ ಮುಟ್ಟಿಸಿದ್ದೇವೆ. ಇನ್ನು ಅಪಘಾತ ಕುರಿತು ತನಿಖೆ ಶುರುವಾಗಿದ್ದು ನಂತರ ಯಾರದ್ದು ತಪ್ಪು ಎಂದು ತಿಳಿಯಲಿದೆ ಎಂದರು.
ಇದೇ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಜಹಾನಿಯ ಸಾಜೀದ ಸಮೀರ್, ಜಿಲ್ಲಾ ಹೆಚ್ಚುವರಿ ಪೊಲೀಸ ವರಿಷ್ಠಾಧಿಕಾರಿ ಜಿ.ಹರೀಶ್, ಜಿಲ್ಲಾ ರಿಮ್ಸ್ ನಿರ್ದೇಶಕ ರಮೇಶ, ಆಡಳಿತಾಧಿಕಾರಿ ಡಾ.ಕೆ.ಆರ್.ದುರುಗೇಶ್, ಜಿಲ್ಲಾ ಶಸ್ತ್ರ ಚಿಕಿತ್ಸೆಕರಾದ ಡಾ.ವಿಜಯಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾನವಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ, ರಿಮ್ಸ್ ವೈದ್ಯಾಧಿಕಾರಿಗಳು ಹಾಗೂ ನಗರಸಭೆಯ ಸದಸ್ಯರು ಸೇರದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.