suddiduniya.com

Dengue Larva survay :ಡೆಂಗ್ಯೂ ಲಾರ್ವ ಸಮೀಕ್ಷೆಗೆ ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಚಾಲನೆ

Dengue Larva survay

ಲಿಂಗಸುಗೂರು : ಡೆಂಗ್ಯೂ ಲಾರ್ವ ಸಮೀಕ್ಷೆ (Dengue Larva survay  )ಕಾರ್ಯಕ್ಕೆ ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಮುನ್ನೂರು ಶುಕ್ರವಾರ ಚಾಲನೆ ನೀಡಿದರು.

Dengue Larva survay
Dengue Larva survay

ನಂತರ ಮಾತನಾಡಿದ ಅವರು, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆಯಿಂದ ಆರೋಗ್ಯ ಇಲಾಖೆ (Dengue Larva survay )ಈ ಸಮೀಕ್ಷೆ ನಡೆಸಲಾಗುತ್ತಿದೆ. ಡೆಂಘೀ ರೋಗ ನಿಯಂತ್ರಣಕ್ಕಾಗಿ ಹೆಚ್ಚು ಸಂಗ್ರಹಿಸುವ ನೀರಿನ  ತೊಟ್ಟಿ ಮುಂತಾದವುಗಳನ್ನು ಸ್ವಚ್ಛತೆ ಇಟ್ಟುಕೊಳ್ಳಬೇಕು. ಆರೋಗ್ಯ ಇಲಾಖೆಗೆ ಪುರಸಭೆ ಸಂಪೂರ್ಣ ಸಹಕಾರ ನೀಡಲಿದೆ ಅದೇ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

 ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್ ಮಾತನಾಡಿ, ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತಲು ಹಾಗೂ ತಾರಸಿ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ತೆಂಗಿನ ಚಿಪ್ಪು, ಡೈರ್‌ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ತೊಟ್ಟಿ, ಬಿಂದಿಗೆ, ಡ್ರಮ್‌ ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಬೇಕು ಎಂದು ಸಾರ್ವನಿಕರಿಗೆ ಜಾಗೃತಿ ಮೂಡಿಸಿದರು.

ತಾಲೂಕಿನ ಈಚನಾಳ ಹಾಗೂ ಗೊರೆಬಾಳ ಗ್ರಾಮ ಪಂಚಾಯತಿಗಳಲ್ಲಿ ಆರೋಗ್ಯ ಇಲಾಖೆಯಿಂದ ಆರೋಗ್ಯ ದ ಜಾಗೃತಿ ಕುರಿತು ಸಭೆ ನಡೆಸಲಾಯಿತು.

ರಾಷ್ಟ್ರೀಯ ಆರೋಗ್ಯ ಅಭಿಯಾನ,ಜಿಲ್ಲಾಡಳಿತ,ಜಿ.ಪಂ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ರಾಯಚೂರು, ತಾಲೂಕು ಆರೋಗ್ಯ ಇಲಾಖೆ ವತಿಯಿಂದ  ನಡೆದ ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಷಿ, ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರ ಆರೋಗ್ಯ ಸುರಕ್ಷತೆಯ ಕಾರಣಕ್ಕೆ ಸೊಂಕು ರಹಿತ ರೋಗಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡುವುದಕ್ಕಾಗಿ ಗ್ರಾಮ ಪಂಚಾಯಿತಿ ಗಳಲ್ಲಿ ಆರೋಗ್ಯ ಸಿಬ್ಬಂದಿ, ಅಂಗನವಾಡಿ,ಆಶಾ,ಜನಪ್ರತಿನಿಧಿ,ಸಂಘ ಸಂಸ್ಥೆ ,ವಿವಿಧ ಇಲಾಖೆಗಳ ನೌಕರರ ಒಗ್ಗುಡಿಸಿ ಕಾರ್ಯಪಡೆ ರಚನೆ ಮಾಡಿ,ಜನರನ್ನೂ ವಿವಿಧ ಆರೋಗ್ಯ ಶಿಬಿರಗಳಲ್ಲಿ ಪಾಲ್ಗೊಳ್ಳಲು ಪ್ರೇರೇಪಿಸುವ ಮೂಲಕ ಜನರು ತಮ್ಮ ಆರೋಗ್ಯ ದ ಬಗ್ಗೆ ಜಾಗೃತಿಗೊಳ್ಳುವಂತೆ ಮಾಡಬೇಕು ಹೇಳಿದರು.

ಈ ಸಂಧರ್ಭದಲ್ಲಿ ಈಚನಾಳ ಗ್ರಾ.ಪಂ.ಅಧ್ಯಕ್ಷೆ ಗಂಗಮ್ಮ ಚವ್ಹಾಣ,ಕಾರ್ಯದರ್ಶಿ ಶಿವಪ್ಪ,ಗೊರೆಬಾಳ ಗ್ರಾ.ಪಂ.ಪಿಡಿಓ ಬಸವರಾಜ, ಕ್ಷಯ ರೋಗ ಮೇಲ್ವಿಚಾರಕ ರವಿಕುಮಾರ ಹೂಗಾರ, ಅಂಗನವಾಡಿ ಮೇಲ್ವಿಚಾರಕಿ ನಜ್ಮಾ ಬೇಗಂ,ಸಮುದಾಯ ಆರೋಗ್ಯ ಸಹಾಯಕ ಪ್ರತಾಪ,ಜಗದೀಶ,ಸೇರಿದಂತೆ ಆರೋಗ್ಯ ಸಿಬ್ಬಂದಿ, ಅಂಗನವಾಡಿ,ಆಶಾ,ಸ್ಥಳೀಯ ಜನಪ್ರತಿನಿಧಿಗಳು ಹಾಜರಿದ್ದರು.

Suddiduniya.com

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!