ವಿವಿಧಡೆಯಲ್ಲಿ ಸಂವಿಧಾನ ದಿನಾಚರಣೆ
ಲಿಂಗಸುಗೂರು : ಭಾರತದ ಸಂವಿಧಾನ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಪಾತ್ರವಾಗಿದೆ ಎಂದು ಸ್ಥಳೀಯ ಜೆಎಂಎಫ್‍ಸಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಮಂಜುಳಾ ಉಂಡಿ ಹೇಳಿದರು.
ಪಟ್ಟಣದ ವಕೀಲರ ಭವನದಲ್ಲಿ ಸಂವಿಧಾನ ದಿನಾಚರಣೆ (Constitution Day ) ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ರಚನೆ ಕರಡು ಸಮಿತಿ ಅಧ್ಯಕ್ಷ ಡಾ.ಬಿ.ಆರ್.ಅಂಬೇಡ್ಕರ್ ನೇತ್ರತ್ವದಲ್ಲಿ ಇಡೀ ವಿಶ್ವದ ವಿವಿಧ ದೇಶಗಳ ಸಂವಿಧಾನಗಳ ಕುರಿತು ಅಧ್ಯಯನ ನಡೆಸಿ ಅತ್ಯಂತ ತಾಳ್ಮೆಯಿಂದ ನಮ್ಮ ದೇಶದ ಸಂವಿಧಾನ ರಚನೆ ಮಾಡಿದ್ದಾರೆ. ದೇಶದಲ್ಲಿ ವಿವಿಧ ಜಾತಿಗಳು, ವಿವಿಧ ಭಾಷೆಗಳು, ಸಂಸ್ಕೃತಿಗಳಿಗೆ ಸಂವಿಧಾನದಲ್ಲಿ ಸಮಾನ ಹಕ್ಕು ನೀಡಲಾಗಿದೆ. ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ. ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ, ಆದರೂ ಅನುಷ್ಠಾನಕ್ಕೆ ಬಂದಿದ್ದು 1950 ರ ಜನವರಿ 26 ರಂದು. ಈ ದಿನವನ್ನು ಗಣರಾಜೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ ಎಂದರು.
ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ :
ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ. ಭಾರತದ ಸಂವಿಧಾನಕ್ಕೆ ವಿಶ್ವದಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆ ಇದೆ ಎಂದರು. ಈಗಾಗಿ ಸಂವಿಧಾನದ ಆಶಯಗಳಿಗೆ ದಕ್ಕೆ ತರದಂತೆ ಸಂವಿಧಾನ ನೀಡಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದರು.
ಸಮಾರಂಭದಲ್ಲಿ ಜೆಎಂಎಫ್‍ಸಿ ಪ್ರಧಾನ ನ್ಯಾಯಾಧೀಶ ಅಂಬಣ್ಣ ಕೆ, ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ್, ಉಪಾಧ್ಯಕ್ಷ ಬಸವರಾಜ ವಸ್ತ್ರದ, ಕಾರ್ಯದರ್ಶಿ ಬಾಲರಾಜ ಸಾಗರ, ದೇವೆಂದ್ರ ನಾಯಕ, ಹನುಮಂತರೆಡ್ಡಿ, ಸೇರಿದಂತೆ ಇನ್ನಿತರ ವಕೀಲರು ಉಪಸ್ಥಿತರಿದ್ದರು.
ವಿವಿಧಡೆಯಲ್ಲಿ ಸಂವಿಧಾನ ದಿನಾಚರಣೆ :
ಸಂವಿಧಾನ ದಿನಾಚರಣೆ ಅಂಗವಾಗಿ ತಾಲೂಕಿನ ಎಸಿ, ತಾ.ಪಂ, ತಹಶೀಲ್, ಸೇರಿದಂತೆ ತಾಲೂಕು ಮಟ್ಟದ ಕಚೇರಿಗಳಲ್ಲಿ, ಪುರಸಭೆ , ಬಿಜೆಪಿ, ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ದಿನ ಆಚರಿಸಿ ಸಂವಿಧಾನ ಪೀಠಿಕೆ ಭೋದಿಸಲಾಯಿತು.