ಕಾಲುಬಾಯಿ ರೋಗದ ಲಸಿಕಾ ಅಭಿಯಾನ
ಲಿಂಗಸುಗೂರು : ಜಾನುವಾರುಗಳಿಗೆ ಕಾಡುತ್ತಿರುವ ಕಾಲುಬಾಯಿ ರೋಗ ( Foot mouth disease )ಸಂಪೂರ್ಣ ನಿರ್ಮೂಲನೆಗೆ ಪಣತೊಡಬೇಕಾಗಿದೆ ಶಾಸಕ ಮಾನಪ್ಪ ವಜ್ಜಲ್ ಕರೆ ನೀಡಿದರು.
ಪಟ್ಟಣದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ( Foot mouth disease) ಕಾಲುಬಾಯಿ ರೋಗದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಲು ಮತ್ತು ಬಾಯಿ ರೋಗ ಬಂದಾಗ ಚಿಕಿತ್ಸೆಗೆ ಬದಲಾಗಿ ಲಸಿಕೆಯೇ ಮುಖ್ಯವಾಗಿದೆ ಎಂಬುದನ್ನು ರೈತರು ಅರಿಯಬೇಕು. ಪಶು ವೈದ್ಯರು ಮನೆಮನೆಗೆ ಲಸಿಕಾಕರಣಕ್ಕೆ ಬಂದಾಗ ರೈತರು ತಮ್ಮ ಜಾನುವಾರುಗಳಿಗೆ ಮರೆಯದೇ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ರೈತರಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆಗಾಗಿ ಸರ್ಕಾರ ಲಸಿಕಾ ಅಭಿಯಾನ ಹಮ್ಮಿಕೊಂಡಿದೆ. ಕಾಲುಬಾಯಿ ರೋಗದ ವಿರುದ್ಧ ಎಲ್ಲ ದನ ಎಮ್ಮೆ ಕರುಗಳಿಗೆ ಉಚಿತವಾಗಿ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ಈ ವೇಳೆ ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರಾಚಪ್ಪ ಮಾತನಾಡಿ, ಕೆಲವು ಕಾರಣಗಳಿಂದ ಜಾನುವಾರುಗಳಿಗೆ ಕಾಲಬಾಯಿ ರೋಗ ಹರಡಲು ಸಾಧ್ಯವಾಗುತ್ತಿದೆ. ಈ ರೋಗ ನಿಯಂತ್ರಣಕ್ಕಾಗಿ ಸರ್ಕಾರ 2019ರಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಸಿಕೊಂಡು ಬರಲಾಗುತ್ತಿದೆ. ತಾಲೂಕಿನಲ್ಲೂ ಕೂಡಾ ಅಕ್ಟೋಬರ್ 21ರಿಂದ ನವೆಂಬರ್ 20ವರಿಗೆ ಅಂದರೆ ಒಂದು ತಿಂಗಳು ಕಾಲ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದೆ. ತಾಲೂಕಿನಲ್ಲಿರುವ ಎಲ್ಲಾ ಪಶು ಚಿಕಿತ್ಸಾಲಯಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮನೆ ಮನೆಗಳಿಗೆ ತೆರಳಿ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತಿದೆ. ಕಾಲುಬಾಯಿ ರೋಗ ತಡೆಗಟ್ಟಲು ಲಸಿಕೆ ಹಾಕುವುದೇ ಪರಿಹಾರ, ಈ ಅಭಿಯಾನಕ್ಕೆ ರೈತರು ಸಹಕಾರ ನೀಡಬೇಕು ಎಂದರು.
ಇದೇ ವೇಳೆ ಶಾಸಕ ಮಾನಪ್ಪ ವಜ್ಜಲ್ ಸಿಬ್ಬಂದಿಗಳಿಗೆ ಕಾಲುಬಾಯಿ ರೋಗ ಲಸಿಕೆ ಅಭಿಯಾನದ ಕಿಟ್ ವಿತರಿಸಲಾಯಿತು. ನಂತರ ಲಸಿಕಾ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಮುನ್ನೂರು, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ, ಪುರಸಭೆ ಸದಸ್ಯ ಮುದುಕಪ್ಪ ನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ಮಾಳೂರು, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ನಾರಾಯಣಪ್ಪ ರಾಠೋಡ್, ಹಾಗೂ ಇನ್ನಿತರಿದ್ದರು.
ವಿವಿಧಡೆ ಕಿತ್ತೂರು ರಾಣಿ ಚೆನ್ನಮ್ಮನವರ ಜಯಂತ್ಯೋತ್ಸವ :
ಲಿಂಗಸುಗೂರು ಪಟ್ಟಣದ ಕಾಂಗ್ರೇಸ್ ಪಕ್ಷದ ಕಛೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ಆಚರಣೆ ಮಾಡಲಾಯಿತು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ಪಂಚಮಿಸಾಲಿ ಸಮಾಜದ ಅಧ್ಯಕ್ಷ ಅಮರೇಶ ತಾವರಗೇರಾ, ಮುಖಂಡರಾದ ಶಂಕರಗೌಡ ಅಮರಾವತಿ, ಮಹಾಂತೇಶ ಪಾಟೀಲ್, ವಿಜಯಲಕ್ಷ್ಮೀ ಗುಂಡಸಾಗರ, ಶ್ವೇತಾ ಲಾಲಗುಂದಿ, ಅಮರೇಶ ಚಿಕ್ಕಹೆಸರೂರು, ಪ್ರಭುಸ್ವಾಮಿ ಅತ್ನೂರು, ಸಂಜೀವ ಕಂದಗಲ್, ಹಾಜಿಬಾಬು ಸೇರದಂತೆ ಅನೇಕರಿದ್ದರು.
ಬಿಜೆಪಿ ಕಚೇರಿಯಲ್ಲೂ ಆಚರಣೆ :
ಪಟ್ಟಣದ ಭಾರತೀಯ ಜನತಾ ಪಾರ್ಟಿ ಕಛೇರಿಯಲ್ಲಿ ಕನ್ನಡ ನಾಡಿನ ವೀರ ವನಿತೆ, ಶೌರ್ಯ ಮತ್ತು ಸ್ವಾಭಿಮಾನದ ಪ್ರತೀಕ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು. ಈ ವೇಳೆ ಶಾಸಕ ಮಾನಪ್ಪ ವಜ್ಜಲ್, ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ಮಾಳೂರು,ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ, ವಿರುಪಾಕ್ಷಪ್ಪ ಹಂದ್ರಾಳ, ಗಿರಿಮಲ್ಲನಗೌಡ ಕರಡಕಲ್,ಮಲ್ಲಿಕಾರ್ಜುನ ನಾಡಗೌಡ ಸೇರಿದಂತೆ ಅನೇಕರಿದ್ದರು.
ಮಿನಿ ವಿಧಾನಸೌಧದಲ್ಲೂ ಜಯಂತಿ ಆಚರಣೆ :
ಲಿಂಗಸುಗೂರು ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಿಸಲಾಯಿತು. ಈ ವೇಳೆ ಶಾಸಕ ಮಾನಪ್ಪ ವಜ್ಜಲ್, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ, ವೀರಶೈವ ಮಹಾಸಭಾ ತಾಲೂಕಾಧ್ಯಕ್ಷ ಶರಣಪ್ಪ ಮೇಟಿ, ಪಂಚಮಸಾಲಿ ಸಮಾಜದ ಅಧ್ಯಕ್ಷ ಅಮರೇಶ ತಾವರಗೇರಾ, ತಹಶೀಲ್ದಾರ ಶಂಶಾಲ0, ಮುಖಂಡರಾದ ಶಂಕರಗೌಡ ಅಮರಾವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ, ರಾಜಣ್ಣ ಪಲ್ಲೇದ್ ಸೇರಿದಂತೆ ಇನ್ನಿತರಿದ್ದರು.