ಲಿಂಗಸುಗೂರಿನಲ್ಲಿ ಹೋರಾಟ
ಲಿಂಗಸುಗೂರು (lingasugur): ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ (Technical post) ನೀಡುವ ವೇತನ ಶ್ರೇಣಿ (Pay Scale)ನಿಗದಿಪಡಿಸಿ ಆದೇಶ ನೀಡುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ನಡೆದ ಹೋರಾಟ ತಾಲೂಕು ಘಟಕದ ಪದಾಧಿಕಾರಿಗಳು ಸಹಾಯಕ ಆಯುಕ್ತರ ಕಚೇರಿ(AC Office) ಎದುರು ಗುರುವಾರ ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಿ :
ಸರ್ಕಾರ ಸಂಯೋಜನೆ, ಇ-ಆಪೀಸ್ ಸೇರಿ 21 ವೆಬ್ ಮತ್ತು ಮೊಬೈಲ್ ಅಪ್ಲಿಕೇಷನ್‌ಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳ ಜವಬ್ದಾರಿಯನ್ನು ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು.
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಸೌಲಭ್ಯಗಳ ಕೊರತೆಯಿಂದಾಗಿ ಅನೇಕ ಸಮಸ್ಯೆಗಳು ಎದುರಿಸುವಂತಾಗಿದೆ ಈಗಾಗಿ ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತವಾದ ಕಛೇರಿ ಹಾಗೂ ಪರಿಕರಗಳನ್ನು ಒದಗಿಸುವ ಜೊತೆಗೆ ಅತ್ಯುತ್ತಮ ಗುಣಮಟ್ಟದ ಮೊಬೈಲ್ ಪೋನ್, ಸಿಯುಜಿ ಸಿಮ್ ಮತ್ತು ಡೇಟಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್‌ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು.
ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರಿಗೂ ಆಗಿರುವ ಎಲ್ಲಾ ಅಮಾನತ್‌ಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು, ಕೆಸಿಎಸ್‌ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರಗಿಸುವಂತೆ ಸೂಕ್ತ ಆದೇಶ ನೀಡಬೇಕು. ಕರ್ನಾಟಕ ಹೈಕೋರ್ಟ್ ರಿಟ್ ಪಿಟಿಷನ್ ಸಂಖ್ಯೆ 329/23ರ ಅಂತಿಮ ತೀರ್ಪಿಗೆ ಒಳಪಡಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಖಾಲಿ ಇರುವ ಎಫ್‌ಡಿಸಿ ಹುದ್ದೆಗಳಿಗೆ ತಕ್ಷಣವೇ ಪದೋನ್ನತಿ ನೀಡಬೇಕು. ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಿ.
25 ಲಕ್ಷ ರೂ ಪರಿಹಾರ ನೀಡಿ
ಅಂತರ ಜಿಲ್ಲಾ ಪತಿ ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ ನೀಡಬೇಕು. ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ಸಭೆಗಳನ್ನು ಕಡ್ಡಾಯವಾಗಿ ನಿಷೇಧಿಸಬೇಕು. ವಂಶವೃಕ್ಷ, ಜಾತಿ ಪ್ರಮಾಣ ಪತ್ರ ಹಾಗೂ ಇತರೆ ಪ್ರಮಾಣ ಪತ್ರಗಳ ವಿತರಣೆ ವಿಚಾರವಾಗಿ ಕಂದಾಯ ಇಲಾಖೆ ಅಧಿಕಾರಿಗಳ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಎಫ್‌ಐಆರ್ ದಾಖಲಿಸುತ್ತಿರುವುದನ್ನು ನಿಲ್ಲಿಸಿ ತಪ್ಪು ಮಾಹಿತಿ ನೀಡುವ ಅರ್ಜಿದಾರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸುವ ಬಗ್ಗೆ ಇಲಾಖೆಯ ಮುಖ್ಯಸ್ಥರಿಗೆ ಸೂಕ್ತ ಆದೇಶ ನೀಡಬೇಕು. ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವಾಗ ಜೀವ ಹಾನಿ ಆಗುವ ಗ್ರಾಮ ಆಡಳಿತ ಅಧಿಕಾರಿಗಳ ಕುಟಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಬೇಕು. ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಿ.
ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡಬೇಕು. ದಫ್ತರ್ ಹಾಗೂ ಜಮಾಬಂಧಿಯನ್ನು ರದ್ದುಪಡಿಸಬೇಕು, ಅನ್ಯ ಇಲಾಖೆಯ ಕೆಲಸ ನಿರ್ವಹಿಸದಂತೆ ಸೂಕ್ತ ಆದೇಶ ನೀಡಬೇಕು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಗುರುವಾರ ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ವೆಬ್ ಅಪ್ಲಿಕೇಶನ್ ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಅಮರೇಶ ರಾಠೋಡ್, ತಾಲೂಕಾಧ್ಯಕ್ಷ ವಿನಯಕುಮಾರ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪದಾಧಿಕಾರಿಗಳಾದ ಬಸವರಾಜ, ದೇವಣ್ಣ ಪ್ರಜಾರ, ಮಲ್ಲಿಕಾರ್ಜುನ ಕಟ್ಟಿಮನಿ, ವೇಸಪ್ಪ, ನಾಗರತ್ಮ, ಶಾರದಾಬಾಯಿ, ಮಹಿಬೂಬು, ರಮೇಶ, ನಸೀಮಾಬೇಗಂ, ಧುವೃ ದೇಶಪಾಂಡೆ, ಮಹೇಶ ಕುಮಾರ, ಪುಷ್ಟಲತಾ, ದೀಪಿಕಾ,ಚಂದ್ರಶೇಖರ್ ಸೇರಿದಂತೆ ಇನ್ನಿತರಿದ್ದರು.
ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ನಡೆದ ಹೋರಾಟ ತಾಲೂಕು ಘಟಕದ ಪದಾಧಿಕಾರಿಗಳು ಸಹಾಯಕ ಆಯುಕ್ತರ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ |