ನೊಂದ ಬಾಲಕಿಗೆ 4.50 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಲಿಂಗಸುಗೂರು : 2019ರಲ್ಲಿ ತಾಲೂಕಿನ ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ವೆಸಗಿದ ಆರೋಪಿಗೆ ಜಿಲ್ಲಾ 3ನೇ ಹೆಚ್ಚುವರಿ ನ್ಯಾಯಲಯದ ನ್ಯಾಯಾಧೀಶರು 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ( judgement )ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆ ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2019 ಏಪ್ರೀಲ್ ರಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ 3ನೇ ಹೆಚ್ಚವರಿ ಮತ್ತು ಸತ್ರ ಪೋಕ್ಸೋ ನ್ಯಾಯಾಲಯದ ಸಿಂಧನೂರಿನ ಪೀಠ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ( judgement )ಆದೇಶ ನೀಡಿರುತ್ತಾರೆ.
ಲಿಂಗಸೂಗೂರು ತಾಲೂಕಿನ ಹೂನೂರು ಗ್ರಾಮದ ನಿವಾಸಿಯಾದ ನಾಗರಾಜ ತಂದೆ ಮಲ್ಲಪ್ಪ ಹಡಪದ್ (23) ಶಿಕ್ಷೆಗೆ ಗುರಿಯಾದ ಆರೋಪಿ, ನೊಂದ ಅಪ್ರಾಪ್ತ ಬಾಧಿತಳ ತಂದೆ ನೀಡಿದ ದೂರಿನ ಮೇರೆಗೆ ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ಮಸ್ಕಿ ವೃತ್ತ ನಿರೀಕ್ಷಕ ಚನ್ನಯ್ಯ ಹಿರೇಮಠ ಇವರು ಆರೋಪಿತನ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಸಲ್ಲಿಸಿದ್ದರು. ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸತ್ರ ಪೋಕ್ಸ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಆರೋಪಿ ವಿರುದ್ಧ ಸಾಕ್ಷಿ ಪುರಾವೆಗಳನ್ನು ಪರಿಶೀಲಿಸಿ ಆರೋಪಿಯ ಮೇಲಿನ ಅಪಾದನೆ ಸಾಬೀತಾಗಿದೆ ಎಂದು ಶಿಕ್ಷೆ ವಿಧಿಸಿ ತೀರ್ಪು (judgement )ನೀಡಿದ್ದಾರೆ.
10 ವರ್ಷ ಕಠಿಣ ಶಿಕ್ಷೆ, 20 ಸಾವಿರ ರೂ.ದಂಡ :
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪಿ ನಾಗರಾಜ ತಂದೆ ಮಲ್ಲಪ್ಪ ಹಡಪದ್ ಗೆ 10 ವರ್ಷ ಕಾಲ ಕಠಿಣ ಕಾರಗೃಹ ಶಿಕ್ಷೆ, ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಹಾಗೂ ಸರ್ಕಾರದ ಸಂತ್ರಸ್ತರ ಪರಿಹಾರ ನಿಧಿಯಿಂದ ನೊಂದ ಬಾಲಕಿಗೆ 4,50,000 ರೂಪಾಯಿ ಪರಿಹಾರ ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಂ. ಮಂಜುನಾಥ ಅವರು ವಾದವನ್ನು ಮಂಡಿಸಿದರು. ಸಾಕ್ಷಿದಾರರನ್ನು ಮಾನ್ಯ ನ್ಯಾಯಾಲಯಕ್ಕೆ ಸಮಯಕ್ಕೆ ಸರಿಯಾಗಿ ಪೇದೆಗಳಾದ ಜಿಂದಾವಲಿ, ಚನ್ನಬಸವ ಸ್ವಾಮಿ ಮತ್ತು ರುದ್ರಗೌಡ ರವರು ಕರೆತಂದು ಸಹಕರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.