ತಾಲೂಕು ಆಡಳಿತದಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಲಿಂಗಸುಗೂರು : ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯ ಶ್ರೀಮಂತಿಕೆ ಮತ್ತಷ್ಟು ವಿಸ್ತರಿಸಬೇಕು ಎಂದು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ ಹೇಳಿದರು.
ಪಟ್ಟಣದ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ (Kannada Rajyotsava) ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಭಾಷೆ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನವೆಂಬರ್ 1, 1973 ರಂದು, ಕರ್ನಾಟಕ ರಾಜ್ಯವೆಂದು ಮರುನಾಮಕರಣಗೊಂಡು 51 ವರ್ಷ ಪೂರ್ಣಗೊಂಡಿರುವ ಸುದಿನವಾಗಿದೆ. ಹಲವು ಮಹನೀಯರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಗಿದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸ ಇದೆ. ಕನ್ನಡಿಗರಾದ ನಾವು ನುಡಿ ಕನ್ನಡ, ನಡೆ ಕನ್ನಡ, ಉಸಿರು ಕನ್ನಡ ಎಂದು ಜೀವಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಕನ್ನಡ ಭಾಷೆ ಉಳಿಸಿ ಬೆಳಸುವುದು ಪ್ರತಿಯೊಬ್ಬರ ಕನ್ನಡಿಗರ ಕರ್ತವ್ಯವಾಗಿದೆ ಎಂದರು.
ಸಮಾರಂಭದಲ್ಲಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿ, ಕನ್ನಡ ರಾಜ್ಯೋತ್ಸವ ರಾಜ್ಯದ ಎಲ್ಲೆಡೆ ಮಾತ್ರವಲ್ಲದೇ ವಿದೇಶಗಳಲ್ಲು ಸಹ ಕನ್ನಡಿಗರು ಕನ್ನಡ ಭಾಷೆಯ ಹಬ್ಬ ಆಚರಿಸುವುದು, ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ನೆನೆದು ಮೆಲುಕುಹಾಕುವುದು ಸಾಮಾನ್ಯ. ಇದೊಂದು ಸಡಗರದ ಹಬ್ಬ ಸಹ ಎಲ್ಲಿರಿಗೂ. ಇನ್ನು ಶಾಲಾ, ಕಾಲೇಜುಗಳಲ್ಲಿ ಈ ಹಬ್ಬವನ್ನು ಹಲವು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವೇ ನಡೆಸಲಾಗುತ್ತದೆ. ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರ ದಲ್ಲಿ ಕನ್ನಡವನ್ನೇ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ ಎಂದು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷ ಬಾಬುರೆಡ್ಡಿ ಮುನ್ನೂರು, ಪಿಕಾರ್ಡ ಬ್ಯಾಂಕ್ ಅಧ್ಯಕ್ಷ ಬಸಣ್ಣ ಮೇಟಿ, ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ತಹಶೀಲ್ದಾರ ಶಂಶಾಲಂ, ತಾ.ಪಂ ಇಒ ಉಮೇಶ, ಬಿಇಒ ಹುಂಬಣ್ಣ ರಾಠೋಡ್, ಸಿಪಿಐ ಹೊಸಕೇರಪ್ಪ, ಬಿಆರ್‌ಸಿ ಹನುಮಂತಪ್ಪ ಕುಳಗೇರಿ ಸೇರಿದಂತೆ ಇನ್ನಿತರಿದ್ದರು.
ಕರವೇಯಿಂದ ರಾಜ್ಯೋತ್ಸವ ಆಚರಣೆ :
ಪಟ್ಟಣದ ಬಸವೇಶ್ವರ ಕಾಲೇಜು ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ ಶೆಟ್ಟಿ ಬಣ) ತಾಲೂಕ ಘಟಕದಿಂದ 69 ನೇ ಕನ್ನಡ ರಾಜ್ಯೋತ್ಸವ (Kannada Rajyotsava )ಆಚರಿಸಿದರು.
ಸಮಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಮಾತನಾಡಿ, ಕರ್ನಾಟಕ ಬರಿ ನಾಡಲ್ಲ, ನಮ್ಮ ಸಂಸ್ಕೃತಿಯ ಭೀಡು, ಕನ್ನಡ ಕೇವಲ ನುಡಿ ಅಲ್ಲಾ, ನಮ್ಮ ಅಂತರಂಗದ ಮಾತಾಗಿದೆ. ಕನ್ನಡ ನಾಡು ನುಡಿಗೆ ದಕ್ಕೆ ಉಂಟಾದಾಗ ಅದರ ವಿರುದ್ಧ ನಿಲ್ಲುವುದೇ ಕರ್ನಾಟಕ ರಕ್ಷಣಾ ವೇದಿಕೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಜಿಲ್ಲಾದ್ಯಕ್ಷ ಪಾಮಯ್ಯ ಮುರಾರಿ, ಪುರಸಭೆ ಸದಸ್ಯರಾದ ಮಹಮ್ಮದ್ ರಫೀ , ಅಬ್ದುಲ್ ರೌವೂಫ್, ಕರವೇ ಅಧ್ಯಕ್ಷ ಆಂಜನೇಯ ಭಂಡಾರಿ, ಕರವೇ ಗೌರವಧ್ಯಕ್ಷ ಅರುಣ್ ಕುಮಾರ ದಂಡಾಲಿ, ಕಾಂಗ್ರೆಸ್ ಮುಖಂಡ ಶಿವಪ್ಪ ನಾಯಕ, ನರೇಶ್ ರೆಡ್ಡಿ ಮುನ್ನೂರು, ದಲಿತ ಮುಖಂಡರಾದ ರಮೇಶ್ ಗೊಸ್ಲೆ, ನಾಗರಾಜ್ ತುಗ್ಲಿ, ಹನುಮಂತ ಜಾಲಿಬೆಂಚಿ, ಅನಿಲ್ ಕುಮಾರ ಹಾಗೂ ಇನ್ನಿತರಿದ್ದರು.
ಸರ್ಜಾಪುರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ :
ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮದ ಘಟಕವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಈ ವೇಳೆ ಜಿ.ಪಂ ಮಾಜಿ ಅಧ್ಯಕ್ಷ ಗುಂಡಪ್ಪ ನಾಯಕ, ವಿಕ್ರಂಗೌಡ, ಗುಂಡಪ್ಪ ನಾಯಕ, ಏಕಅಮರಣ್ಣ, ಕರವೇ ಗ್ರಾಮ ಘಟಕದ ಅಧ್ಯಕ್ಷ ಜಿ ಭಗೀರಥ, ಉಪಾಧ್ಯಕ್ಷ ನಿಜಗುಣ, ಶ್ರೀಕಾಂತ್, ರಮೇಶ್, ವೆಂಕಟೇಶ್, ವೆಂಕೋಬ, ಸಂಜೀವ, ಆನಂದ, ಪಂಪಣ್ಣ, ಮತ್ತು ಪಿಡಿಒ ಶೋಭಾ ರಾಣಿ ಮುಂತಾದವರು ಇದ್ದರು.
ವೀರನಾಗಮ್ಮ ಪಬ್ಲಿಕ್ ಶಾಲೆಯಲ್ಲಿ ರಾಜ್ಯೋತ್ಸವ ಆಚರಣೆ :
ಪಟ್ಟಣದ ವೀರನಾಗಮ್ಮ ಪಬ್ಲಿಕ್ ಶಾಲೆಯಲ್ಲಿ 69ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಾಸಕ ಮಾನಪ್ಪ ವಜ್ಜಲ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕರಿಯಪ್ಪ ಡಿ ವಜ್ಜಲ್, ಬಿಜೆಪಿ ಮಂಡಲ ಅಧ್ಯಕ್ಷರಾದ ಅಯ್ಯಪ್ಪ ಮಾಳೂರು, ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು, ಶಾಲೆಯ ಶಿಕ್ಷಕ ವೃಂದವು ಉಪಸ್ಥಿತರಿದ್ದರು.
ಶಾಸಕರ ಶಾಲೆಯಲ್ಲಿ ಶಾಸಕ ವಜ್ಜಲ್ ಧ್ವಜಾರೋಹಣ :
ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಸಕ ಮಾನಪ್ಪ ವಜ್ಜಲ್ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಚೆನ್ನಬಸವರಾಜ ಮೇಟಿ, ಶಿಕ್ಷಣ ಸಂಯೋಜಕ ಹನುಮಂತಪ್ಪ ಕುಳಗೇರಿ , ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ಮಾಳೂರು ಹಾಗೂ ಇನ್ನಿತರಿದ್ದರು.
ಆನಾಹೊಸೂರಿನಲ್ಲಿ ಕನ್ನಡ ರಾಜ್ಯೋತ್ಸವ :
ತಾಲೂಕಿನ ಆನಾಹೊಸೂರು ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇಧಿಕೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಯಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಸಂದರ್ಭದಲ್ಲಿ ಕರ್ನಾಟಕ ರಕ್ಷಣಾವೇದಿಕೆ ಗ್ರಾಮ ಘಟಕದ ಆಧ್ಯಕ್ಷ ಶ್ರೀನಿವಾಸ ಭೋವಿ, ಪರಿಸರ ಸಂರಕ್ಷಣಾ ವೇಧಿಕೆ ಜಿಲ್ಲಾಧ್ಯಕ್ಷ ಉಸ್ಮಾನ ಆರ್ ಬೆಂಡೊಣಿ, ಗ್ರಾಮದ ಹಿರಿಯ ಮುಖಂಡ, ತಾಲೂಕ ಪಂಚಾಯತ್ ಮಾಜಿ ಉಪಾಧ್ಯಕ್ಷ ಡಿ.ಜಿ.ಗುರಿಕಾರ. ತಾಲೂಕ ಪಂಚಾಯತ ಮಾಜಿ ಸದಸ್ಯ ವಾಹಿದ್ ಖಾದ್ರಿ, ಗ್ಯಾನಪ್ಪ ಕಟ್ಟಿಮನಿ, ಸಂಗಣ್ಣ ಹೊಸಮನಿ, ಶರಣಪ್ಪ ಕಟಗಿ, ಗುಂಡಪ್ಪ, ಸುರೇಶ ಅಪ್ಪಾಜಿ ಸೌಂಡ್ಸ, ಅಮರೇಶ ಇಂಗಳಗಿ ಮಲ್ಲೆಶ ಗುರಿಕಾರ್ ಹಾಗೂ ಇನ್ನಿತರಿದ್ದರು.