suddiduniya.com

SC Internal reservation  : ಒಳ ಮೀಸಲಾತಿ ಜಾರಿಗಾಗಿ ಧ್ವನಿ ಎತ್ತಲು ಆಗ್ರಹಿಸಿ ತಮಟೆ ಚಳುವಳಿ

SC Internal reservation

ಲಿಂಗಸುಗೂರು : ಪರಿಶಿಷ್ಟ ಜಾತಿಯಲ್ಲಿ ಉಪ ಜಾತಿಗಳ ಒಳಮೀಸಲಾತಿ (SC Internal reservation)  ಜಾರಿಗೊಳಿಸುವಂತೆ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಒತ್ತಾಯಿಸಿ ಒಳಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ಪದಾಧಿಕಾರಿಗಳು ಶಾಸಕ ಮಾನಪ್ಪ ವಜ್ಜಲ್‍ ಅವರ ಕಚೇರಿ ಎದುರು ತಮಟೆ ಚಳುವಳಿ ನಡೆಸಿದರು.

2024 ಆಗಸ್ಟ 1ರಂದು ಸುಪ್ರೀಂ ಕೋರ್ಟಿನ ಸಂವಿಧಾನ ಪೀಠ ಒಳಮೀಸಲಾತಿ ಜಾರಿ ( SC Internal Reservation) ಮಾಡುವ ಅಧಿಕಾರ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತು. ಈ ತೀರ್ಪು ಬಂದು ನಾಲ್ಕು ತಿಂಗಳಾದರೂ ಮೀಸಲಾತಿ ಜಾರಿಗೆ ತರುವಲ್ಲಿ ಕರ್ನಾಟಕ ಸರಕಾರ ಆಮೆವೇಗದಲ್ಲಿ ಸಾಗಿದೆ. ವಿನಾಕಾರಣ ವಿಳಂಭ ನೀತಿ ಅನುಸರಿಸಿದೆ.

 ಒಳ ಮೀಸಲಾತಿ ಜಾರಿಗೆ ಕಾಟಚಾರಕ್ಕೆ ನ್ಯಾ.ನಾಗಮೋಹನ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ, ಎರಡೇ ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆ ಎಂದು ಸರಕಾರ ಹೇಳಿತ್ತು. ಆದರೆ ಆಯೋಗ ರಚಿಸಿ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ,ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ಕೊಡದೇ ಕಾಲಹರಣ ನಡೆಸಲಾಗುತ್ತಿದೆ. ಆಯೋಗ ರಚಿಸಬೇಕೆಂದು ಎನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ, ಸರಕಾರದ ಮುಂದೆ ನ್ಯಾ.ಸದಾಶಿವ ಆಯೋಗ, ಮಾಧುಸ್ವಾಮಿ ಸಮಿತಿ ವರದಿ ಇದೆ. 2011 ಜನಗಣತಿಯ ಅಂಕಿಅಂಶಗಳ ಆಧಾರದಲ್ಲಿ ವರ್ಗಿಕರಣ ಮಾಡಿದೆ. ಈಗ ಮತ್ತೆ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಅದೇ ಕೆಲಸ ಕೊಡಲಾಗಿದೆ. ಸರಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಒಳ ಮೀಸಲಾತಿ ಜಾರಿ ಆಗುವವರೆಗೆ ಸರಕಾರದ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ಕೊಟ್ಟಿತ್ತು, ಆದರೆ ಈ ಭರವಸೆ ಜಾರಿಯಾಗಿಲ್ಲ, ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಯಿಂದ ಬರುತ್ತಲೇ ಇವೆ ಇದು ಖಂಡನಾರ್ಹ.

ಹರಿಯಾಣದ ಬಿಜೆಪಿ ಸರಕಾರ ಸುಪ್ರೀಂ ಕೋರ್ಟಿನ ತೀರ್ಪು ಬಂದ ಮೊದಲ ವಾರದಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿದೆ, ಆದರೆ ರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಬದ್ಧತೆ ತೋರಿಸುವಲ್ಲಿ ವಿಫಲವಾಗಿದೆ. ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳ ಮೀಸಲಾತಿ (SC Internal Reservation) ಜಾರಿ ಮಾಡುತ್ತೇವೆಂದು ಹಸಿಸುಳ್ಳು ಹೇಳಿದ ಕಾಂಗ್ರೆಸ್‍ ನಾಯಕರು ಮಾದಿಗ ಮತ್ತು ಹೊಲೆಯ ಜನತೆಯ ವಿಶ್ವಾಸ ಕಳೆದುಕೊಂಡಿದ್ದಾರೆ.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ (SC Internal Reservation) ಮಾದಿಗ ಮತ್ತು ಹೊಲೆಯ ಉಪಜಾತಿಗಳ ಒಳ ಮೀಸಲಾತಿ ಜಾರಿಗೊಳಿಸುವಂತೆ ಸರಕಾರದ ಮೇಲೆ ಒತ್ತಡ ಹಾಕಬೇಕು.ಮಾದಿಗ ಮತ್ತು ಹೊಲೆಯ ಉಪಜಾತಿಗಳ ಪರ ಧ್ವನಿ ಎತ್ತಿ ಸಹಕಾರ ನೀಡಬೇಕೆಂದು ಶಾಸಕರಿಗೆ ಒತ್ತಾಯಿಸಿದರು.

ಸುಪ್ರೀಂ ಕೋರ್ಟಿನ ತೀರ್ಪು ಬಂದು ನಾಲ್ಕು ತಿಂಗಳಾದರೂ ಒಳ ಮೀಸಲಾತಿ ಜಾರಿ ಮಾಡದೇ ಕಾಲಹರಣದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‍ ಸರಕಾರದ ವಿರುದ್ಧ 2024 ಡಿಸೆಂಬರ್ 16ರಂದು ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಸಲಾಗುವುದು.

ಈ ವೇಳೆ ಒಳ ಮೀಸಲಾತಿ ಜಾರಿಗಾಗಿ ಐಕ್ಯ ಹೋರಾಟ ಸಮಿತಿ ಮುಖಂಡರಾದ ಡಿ.ಬಿ.ಸೋಮನಮರಡಿ, ಹನುಮಂತಪ್ಪ ಕುಣಿಕೆಲ್ಲೂರು, ಚೆನ್ನಪ್ಪ ಬಾಲಗಾವಿ, ನಾಗಪ್ಪ ಈಚನಾಳ, ವೆಂಕಟೇಶ ಮುಂಡೇವಾಡಿ, ಹುಲಗಪ್ಪ ಕೆಸರಟ್ಟಿ, ಯಂಕಪ್ಪ ಚಿತ್ತಾಪುರ, ಮೋಹನ ಗೋಸ್ಲೆ, ಅನೀಲ ಕುಮಾರ, ವಿಜಯಕುಮಾರ ಪೋಳ, ಮೌನೇಶ ಐದನಾಳ, ಶರಣಪ್ಪ ಕಟ್ಟಿಮನಿ, ದೇವೆಂದ್ರ ಕರಡಕಲ್, ಹುಲಗಪ್ಪ, ಸಂಗಮೇಶ ರಾಂಪುರ, ಈರಪ್ಪ ಕುಣಿಕೆಲ್ಲೂರು, ಬಸವರಾಜ ಕುಣಿಕೆಲ್ಲೂರು, ಬಸವರಾಜ ಗೋಸ್ಲೆ,ಪ್ರೇಮಜೀವಿ, ಯಲ್ಲಪ್ಪ ಮಾಚನೂರು, ದೇವೆಂದ್ರ ಸಂತೆಕೆಲ್ಲೂರು ಸೇರಿದಂತೆ ಅನೇಕರಿದ್ದರು.

Suddiduniya.com

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!